ಪದವಿ ಪೂರ್ವ ಉಪನ್ಯಾಸಕರ ಸಂಘದ ಚುನಾವಣೆಗೆ ಅಧಿಸೂಚನೆ

ಪದವಿ ಪೂರ್ವ ಉಪನ್ಯಾಸಕರ ಸಂಘದ ಚುನಾವಣೆಗೆ ಅಧಿಸೂಚನೆ

ಶಿವಮೊಗ್ಗ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ 2026–2031ರ ಅವಧಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅಧಿಸೂಚನೆ ಪ್ರಕಟಿಸಲಾಗಿದೆ.

ರಾಜ್ಯ ಚುನಾವಣಾಧಿಕಾರಿಗಳಾದ ಮೆಹಬೂಬ್ ಪಾಷಾ ಮೂಲಿಮನಿ ಅವರ ಸೂಚನೆಯಂತೆ ಶಿವಮೊಗ್ಗ ಜಿಲ್ಲಾ ಘಟಕದ ಚುನಾವಣಾ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು (ಸೈನ್ಸ್ ಮೈದಾನ) ಪ್ರಾಂಶುಪಾಲ ಜಿ.ಎಫ್. ಕುಟ್ರಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

ಮೇ 29ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಮೇ 30 ಕೊನೆಯ ದಿನವಾಗಿದೆ. ಮೇ 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 1 ಹಾಗೂ 2ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಜೂನ್ 7ರಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಬಳಿಕ ರಾಜ್ಯ ಚುನಾವಣಾಧಿಕಾರಿಗಳ ಪೂರ್ವಾನುಮೋದನೆಯೊಂದಿಗೆ ಫಲಿತಾಂಶ ಪ್ರಕಟಿಸಿ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸದಸ್ಯತ್ವ ಹೊಂದಿದ ಎಲ್ಲಾ ಅರ್ಹ ಉಪನ್ಯಾಸಕರು ಮತ ಚಲಾಯಿಸಲು ಅವಕಾಶವಿದೆ. ನಾಮಪತ್ರಗಳನ್ನು ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೈನ್ಸ್ ಮೈದಾನ, ಬಿ.ಎಚ್. ರಸ್ತೆದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಚುನಾವಣಾ ಕಚೇರಿ ವಿಳಾಸ:
ಜಿಲ್ಲಾ ಚುನಾವಣಾಧಿಕಾರಿಗಳು ,
ಜಿ.ಎಫ್ ಕುಟ್ರಿ
ಪ್ರಾಚಾರ್ಯರು
ಸರ್ಕಾರಿ ಪದವಿ ಪೂರ್ವ ಕಾಲೇಜು, ಸೈನ್ಸ್ ಮೈದಾನ ಬಿಎಚ್ ರಸ್ತೆ ಶಿವಮೊಗ್ಗ 577 201

Leave a Reply

Your email address will not be published. Required fields are marked *