ಮನೆಗಳ್ಳತನ ಮಾಡುತ್ತಿದ್ದ ಚಾಲಕ ಸೆರೆ

ಮನೆಗಳ್ಳತನ ಮಾಡುತ್ತಿದ್ದ ಚಾಲಕ ಸೆರೆ
ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಆತಂಕಕ್ಕೆ ಕಾರಣವಾಗಿದ್ದ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಸಕ್ಸಸ್​ ಕಂಡಿದ್ದಾರೆ. ಈ ಸಂಬಂಧ, ಮನೆಗಳ ಬೀಗ ಮುರಿದು ಕಳ್ಳತನವೆಸಗುತ್ತಿದ್ದ ಆರೋಪಿಯನ್ನು ಬಂಧಿಸಿದ್ದು ಆತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು 33 ವರ್ಷದ ಪ್ರದೀಪ ಬಿ ಎಂದು ಗುರುತಿಸಲಾಗಿದೆ. ಈತ ಮೂಲತಃ ಶ್ರೀರಾಂಪುರದ ಕರುಮಾರಿಯಮ್ಮ ದೇವಸ್ಥಾನದ ಬಳಿಯ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಚಾಲಕನಾಗಿದ್ದಾನೆ.
ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಿಗೇನಹಳ್ಳಿ, ಶ್ರೀರಾಂಪುರ ಹಾಗೂ ವಾಜಪೇಯಿ ಬಡಾವಣೆಗಳಲ್ಲಿ ಹಗಲು ಹೊತ್ತಿನಲ್ಲೇ ಬೀಗ ಹಾಕಿರುವ ಮನೆಗಳಲ್ಲಿ ಕಳ್ತನ ನಡೆಯುತ್ತಿತ್ತು. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ಆರಂಬಿಸಿದ್ದಾರೆ. ಕಳೆದ 12/06/2026 ರಂದು ತನಿಖಾ ತಂಡ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ. ಈ ವೇಳೆ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಟ್ಟು 06 ಮನೆ ಕಳ್ಳತನ ಪ್ರಕರಣ ಬಯಲಿಗೆ ಬಂದಿದೆ. ಇನ್ನೂ ಆರೋಪಿಯಿಂದ 6,00,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ

Leave a Reply

Your email address will not be published. Required fields are marked *