ಇಂದು ವಿಶ್ವ ಯೋಗ ದಿನಾಚರಣೆಯನ್ನು ಕುಂಸಿ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 8-30ಕ್ಕೆ ಶಾಲಾ ಮಕ್ಕಳು ಹಾಗೂ ಪೋಷಕರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಯೋಗ, ಧ್ಯಾನ, ಪ್ರಾಣಾಯಾಮ ಮಾಡುವುದರಿಂದ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ನಮ್ಮ ಆರೋಗ್ಯವನ್ನು ಹಣದಿಂದ ಕೊಂಡು ಕೊಳ್ಳಲು ಸಾಧ್ಯವಿಲ್ಲ. ಹಣವೊಂದೇ ಜೀವನವಲ್ಲಾ, ಆರೋಗ್ಯ ಬಹಳ ಮುಖ್ಯ, ರೋಗ ಬಂದಾಗ ಆಸ್ಪತ್ರೆಗೆ ಹೋಗುವುದಕ್ಕಿಂತ ರೋಗ ಬಾರದಂತೆ ಕ್ರಿಯಾಶೀಲರಾಗಿ, ಚಟುವಟಿಕೆಯಿಂದ ಇರಬೇಕು ಎಂದು ಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ರವರು ತಿಳಿಸಿದರು.
ಕಾರ್ಯ ಕ್ರಮದಲ್ಲಿ ಶಾಲೆಯ ಮಕ್ಕಳು, ಸಹ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಪೋಷಕರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.