ಶಿವಮೊಗ್ಗ ಕೋರ್ಟ್​ಗೆ ಬಾಂಬ್​ ಬೆದರಿಕೆ ! ನ್ಯಾಯಾಲಯದ ಆವರಣದಲ್ಲಿ ತಪಾಸಣೆ..

ಶಿವಮೊಗ್ಗ ಕೋರ್ಟ್​ಗೆ ಬಾಂಬ್​ ಬೆದರಿಕೆ !ನ್ಯಾಯಾಲಯದ ಆವರಣದಲ್ಲಿ ತಪಾಸಣೆ
ಶಿವಮೊಗ್ಗ : ಬುಧವಾರ, ಶಿವಮೊಗ್ಗ ಕೋರ್ಟ್​ಗೆ ಬಾಂಬ್ ಬೆದರಿಕೆ ಬಂದಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜಯನಗರ ಪೊಲೀಸ್ ಸ್ಟೇಷನ್ ಪೊಲೀಸರು ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಬೆದರಿಕೆ ಸಂದೇಶ ಇರುವ ಇಮೇಲ್​ ಒಂದು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (ಪಿಡಿಜೆ) ಅಧಿಕೃತ ಇಮೇಲ್ ವಿಳಾಸಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಹಿತಿಯ ಜಯನಗರ ಪೊಲೀಸ್ ಸ್ಟೇಷನ್​ಗೆ ರವಾನೆಯಾಗಿದ್ದು, ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ನಡೆಸಲಾಗಿದೆ.
ಇನ್ನೂ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಸುತ್ತಮುತ್ತಲಿನ ಪ್ರದೇಶಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ತಪಾಸಣೆ ಕೈಗೊಳ್ಳಲಾಗಿತತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದೊಂದಿಗೆ ಪೊಲೀಸರು ನ್ಯಾಯಾಲಯದ ಕಟ್ಟಡ, ಆವರಣ ಹಾಗೂ ನಿಲ್ಲಿಸಿರುವ ವಾಹನಗಳ ಪ್ರತಿಯೊಂದು ಮೂಲೆಯನ್ನು ತಪಾಸಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *