ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಇಂದು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಪ್ರಯುಕ್ತ ಶಿವಮೊಗ್ಗ ನಗರದ ಕೋರ್ಟ್ ಸರ್ಕಲ್ ನಲ್ಲಿ “ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚುವ ಕಾರ್ಯಕ್ರಮ” ವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾಮಠದ ಗುರುಗಳಾದ ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿರವರು ದಿವ್ಯ ಸಾನಿಧ್ಯ ವಹಿಸಿದ್ದರು. ಇವರೊಂದಿಗೆ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀ ಬಿ.ಎ ರಮೇಶ್ ಹೆಗ್ಡೆ, ಒಕ್ಕಲಿಗರ ಯುವ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ಶ್ರೀ ರಘು ಗೌಡ, ಖಜಾಂಚಿ ಸುನಿಲ್ ಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ಮಲೆನಾಡು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶ್ರೀ ಕೆ.ಎನ್ ರಾಮಕೃಷ್ಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ, ಕೃಷಿ ವಿಶ್ವವಿದ್ಯಾನಿಲಯದ ನಿರ್ದೇಶಕರಾದ ಶ್ರೀ ಶಶಾಂಕ್ ಗೌಡ, ಒಕ್ಕಲಿಗರ ಯುವ ವೇದಿಕೆಯ ನಿರ್ದೇಶಕರಾದ ವೆಂಕಟೇಶ್, ಪ್ರಮೋದ್, ಅರುಣ್, ಧನರಾಜ್, ಗಗನ್, ಗೀತೇಂದ್ರ, ಶೋಭರಾಜ್, ಕಿರಣ್, ಪ್ರಮೋದ್, ವಿನಯ್, ವಿಜಯ್, ಕಿರಣ್, ರಂಗನಾಥ್, ಗಿರಿರಾಜ್, ವೈಭವ್, ಸಮರ್ಥ, ಮಣಿ, ಸಂಜಯ್, ಮಿಲನ್, ಶಶಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಯುವಕರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *