ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
ಶಿವಮೊಗ್ಗ : ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ.
ಶ್ರೀಕಾಂತ್ ಅವರು ಸ್ನೇಹಿತರೊಂದಿಗೆ ಶುಕ್ರವಾರ ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿ, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಮುಂಜಾನೆ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎನ್ನಲಾಗಿದೆ.
ಆದರೆ ರಾತ್ರಿ ವೇಳೆ ಅವರಿಗೆ ತೀವ್ರ ಅಸ್ವಸ್ಥತೆ ಉಂಟಾಗಿ ತಂಗಿದ್ದ ಮನೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಹೊಸನಗರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Leave a Reply

Your email address will not be published. Required fields are marked *