ಶಿವಮೊಗ್ಗ ನಗರದಲ್ಲಿ ನಡೆಯಲಿರುವ ಯುವದಸರ ಕಾರ್ಯಕ್ರಮದ ಅಂಗವಾಗಿ ಖ್ಯಾತ ಚಲನಚಿತ್ರ ನಟ ಕ್ರೇಜಿಸ್ಟಾರ್ ವಿ ರವಿಚಂದ್ರನ್ ರವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಸಿ ಯೋಗೇಶ್ ರವರು ಮಹಾನಗರ ಪಾಲಿಕೆ ಪರವಾಗಿ 20-10-2026 ತಾರೀಕಿನಂದು ಸಂಜೆ 6 ಗಂಟೆಗೆ ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿರುವ ಸಾಧುಕೋಕಿಲ ಮ್ಯೂಸಿಕಲ್ ನೈಟ್ಸ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳಾದ ಶಿವಕುಮಾರ್ ರವರು, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂಎಸ್ ಶಿವಕುಮಾರ್ ರವರು, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವನಾಥ್ ಕಾಶಿ ರವರು, ಮಧುರವರು ಉಪಸ್ಥಿತರಿದ್ದರು.



