ಲೈಂಗಿಕ ಕಿರುಕುಳ ಕೊಡುತ್ತಿರುವ ಉಪನ್ಯಾಸಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ.
ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ಕೊಡಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕೆಂದು ವಿದ್ಯಾರ್ಥಿನಿಯರಿಗೆ
ಲೈಂಗಿಕ ಕಿರುಕುಳ ನೀಡುತ್ತಿರುವ ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕನ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಆಗ್ರಹಿಸಿದೆ.
ಈ ಸಂಬಂಧ ಸೋಮವವಾರ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದ ಎನ್ ಎಸ್ ಯುಐ ಕಾರ್ಯಕರ್ತರು, ತನ್ನ ಲೈಂಗಿಕ ಬಯಕೆಗಳನ್ನು ತೀರಿಸಿಕೊಳ್ಳಲು ಉಪನ್ಯಾಸಕನಾಗಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾಗಿದ್ದ ಉಪನ್ಯಾಸಕ , ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಗಳನ್ನು ಕಳುಹಿಸುತ್ತಿದ್ದು , ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ನೆಪ ಮಾತ್ರಕ್ಕೆ ತಿಳುವಳಿಕೆ ಪತ್ರವನ್ನು ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವುದನ್ನು ಎನ್.ಎಸ್.ಯು.ಐ. ಸಹಿಸುವುದಿಲ್ಲ ಎಂದು ಹೇಳಿದರು.
ಅನೇಕ ಮಹನೀಯರುಗಳು ಕಲಿತು, ಕಲಿಸಿದ ಸಹ್ಯಾದ್ರಿ ಕಾಲೇಜಿನಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ . ನೊಂದ ವಿದ್ಯಾರ್ಥಿನಿಯರು ದೂರು ಕೊಟ್ಟರೂ ಪ್ರಾಂಶುಪಾಲರು ಕ್ರಮ ಕೈಗೊಂಡಿಲ್ಲ. ನಂತರ ಎನ್.ಎಸ್.ಯು.ಐ. ಕುಲಸಚಿವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ನೀಡಲಾಗಿತ್ತು. ಆಗ ಕುಲಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಉಪನ್ಯಾಸಕನ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.
ಕೂಡಲೇ ಕುಲಪತಿಗಳು ಈ ಕಾಮುಕ ಉಪನ್ಯಾಸಕನ ಕೆಲಸದಿಂದ ವಜಾಗೊಳಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ವಿವಿ ಬಂದ್ ನಂತಹ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಯಿತು,
ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯಕುಮಾರ್, ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್‌ಎಸ್, ನಗರಾಧ್ಯಕ್ಷರಾದ ರವಿಕುಮಾರ್, ಚಂದ್ರೋಜಿ ರಾವ್, ಆದಿತ್ಯ, ಸುಭಾನ್, ಅಭಿಷೇಕ್ ಅನುಪಿನ ಕಟ್ಟೆ, ಪ್ರಜ್ವಲ್, ಶ್ರೀಕಾಂತ್, ಕಿಸನ್, ಯೂಸಫ್, ಸಾದುಲ್ಲ, ಅಭಿಷೇಕ್, ಪ್ರಭು, ಶ್ರೇಯಸ್, ಕುಮಾರ್ ಇನ್ನೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು